ಸರ್ಕಾರಿ ಬಸ್​-ಆಟೋ ಡಿಕ್ಕಿ; ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವು, 6 ಜನರಿಗೆ ಗಾಯ..

Accident
Published on

ಯಾದಗಿರಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದು, ಆರು ಜನರು ಗಾಯಗೊಂಡಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕುಂಬಾರಪೇಟ ಬಳಿ ಈ ಅಪಘಾತ ಸಂಭವಿಸಿದೆ. ಆಟೋದಲ್ಲಿದ್ದ 7 ಜನರು ಸುರಪುರದಿಂದ ದೇವಾಪುರಕ್ಕೆ ತೆರಳುತ್ತಿದ್ದರು. ಬಸ್​ ಬೆಂಗಳೂರಿಗೆ ತೆರಳುತ್ತಿದ್ದು, ಆಟೋ ಹಿಂಬದಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಗಾಯಗೊಂಡಿರುವ ಆರು ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net