ಐತ್ತೂರಿನಲ್ಲಿ ಬಸ್-ಕಾರು ಅಪಘಾತ, ಮಗು ಮೃತ್ಯು ನಾಲ್ವರು ಗಂಭೀರ

Accident
Published on

ಕಡಬ: ತಾಲೂಕಿನ ಮರ್ದಾಳ ಸಮೀಪದ ಐತೂರು ಎಂಬಲ್ಲಿ ಸೋಮವಾರ ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ ಪುಟ್ಟ ಮಗು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಹಾಗೂ ಕಡಬ ಕಡೆಯಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಬಸ್ ಐತ್ತೂರು ಪಂಚಾಯಿತಿ ಸಮೀಪ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದು, ನಾಲ್ವರು ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net