ಬಸ್- ಕಾರು ಡಿಕ್ಕಿಯಾಗಿ ಓರ್ವ ಸಾವು, ಐವರು ಗಂಭೀರ

KLR 30-03
ಕೊಲ್ಹಾರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ನಜ್ಗುಗುಜ್ಜಾಗಿರುವುದು.
Published on

ಕೊಲ್ಹಾರ: ಪಟ್ಟಣದ ಹೊರ ವಲಯದ ಕೃಷ್ಣಾ ನದಿ ಸೇತುವೆ ಮೇಲೆ ಮಂಗಳವಾರ ನಸುಕಿನಲ್ಲಿ ಬೊಲೆರೋ ಕಾರು ಹಾಗೂ ಸಾರಿಗೆ ಸಂಸ್ಥೆ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಓರಿಸ್ಸಾ ರಾಜ್ಯ ಸುಂದರಘರ್ ಜಿಲ್ಲಾ ಮೂಲದ ಸಂದೀಪ್ ನಾಯಕ್ (30) ಮೃತಪಟ್ಟವರು.

ಕಾರಿನಲಿದ್ದವರೆಲ್ಲರೂ ಓರಿಸ್ಸಾ ಮೂಲದವರೆನ್ನಲಾಗಿದೆ. ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ 108 ಆಂಬುಲೆನ್ಸ್ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ತೀವ್ರ ಗಾಯಗೊಂಡ ಐವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಮೂವರಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net