ಬಸ್ ಮಗುಚಿ ಬಿದ್ದು ಪ್ರಯಾಣಿಕರಿಗೆ ಗಾಯ

02sunti01
Published on

ಸುಂಟಿಕೊಪ್ಪ: ಜೀಪ್ ಹಾಗೂ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾದ ಪರಿಣಾಮ ಹೆದ್ದಾರಿ ಬದಿಯಲ್ಲಿ ಬಸ್ ಮಗುಚಿ ಬಿದ್ದಿದ್ದು ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕುಶಾಲನಗರ ಕಡೆಯಿಂದ ಸುಂಟಿಕೊಪ್ಪ ಕಡೆಗೆ ಆಗಮಿಸುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕಿಕೊಂಡು ಬರುತ್ತಿದ್ದ ವೇಳೆ ಎದುರಿನಿಂದ ಆಗಮಿಸುತ್ತಿದ್ದ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಬಸ್ ಚಾಲಕ ಅವಘಡವನ್ನು ತಪ್ಪಿಸಲು ಮುಂದಾದಾಗ ಬಸ್ ಹೆದ್ದಾರಿ ಬದಿಯಲ್ಲಿ ಮಗುಚಿಕೊಂಡಿತು. ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡರು. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net