ವಕೀಲೆಗೆ ಕಿರುಕುಳ ಬಸ್ ಚಾಲಕ, ನಿರ್ವಾಹಕ ಬಂಧನ

arrested
Published on

ಮಂಗಳೂರು: ನಗರದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಕೀಲೆ ಕೆ. ಮುಫೀದಾ ರಹ್ಮಾನ್ ಅವರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬನ್ನೊಂದರ ನಿರ್ವಾಹಕ ಭರತ್ ಸಾಲ್ಯಾನ್ ಮತ್ತು ಚಾಲಕ ಶಿವಕುಮಾರ್ ಎಂಬವರನ್ನು ಕದ್ರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.


ದೇರಳಕಟ್ಟೆ ಸಮೀಪದ ಜಲಾಲ್‌ಬಾಗ್ ನಿವಾಸಿಯಾಗಿರುವ ವಕೀಲೆ ಮುಫೀದಾ ರಹ್ಮಾನ್ ಕಳೆದ ಸೋಮವಾರ ಮಧ್ಯಾಹ್ನ ಸುಮಾರು 2ಗಂಟೆಗೆ ಪಿವಿಎಸ್ ಸರ್ಕಲ್ ಬಳಿ ಬೋಂದೆಲ್‌ನಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ತೆರಳುವ ರೂಟ್ ನಂಬ್ರ 19ರ ‘ಆಶೆಲ್’ ಎಂಬ ಹೆಸರಿನ ಖಾಸಗಿ ಬಸ್ಸಿಗೆ ಹತ್ತುವ ವೇಳೆ ಚಾಲಕನು ಅಜಾಗರೂಕತೆಯಿಂದ ಮುಂದಕ್ಕೆ ಚಲಾಯಿಸಿದ್ದರೆ, ಕಂಡಕ್ಟರ್ ವಕೀಲೆಯ ಜೊತೆ ಅತಿರೇಕದಿಂದ ವರ್ತಿಸಿ ಮಾನಸಿಕ ಕಿರುಕುಳ ನೀಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net