

ಕುಂದಾಪುರ: ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಎದುರೇ ಕರ್ಕಶ ಹಾರ್ನ್ ಬಳಸಿದ ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡು ದಂಡ ವಿಧಿಸಿದ ಟನೆ ಬುಧವಾರ ಸಂಜೆ ಕುಂದಾಪುರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಉಡುಪಿಯಿಂದ ಕುಂದಾಪುರ ಬಸ್ ನಿಲ್ದಾಣಕ್ಕೆ ಬಂದ ಖಾಸಗಿ ಬಸ್‌ನ ಚಾಲಕ, ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸಾದ್ ಅವರು ಬಸ್ ನಿಲ್ದಾಣದಲ್ಲಿ ನಿಂತಿದ್ದರೂ ಕರ್ಕಶ ಹಾರ್ನ್ ಹಾಕಿದ್ದಾನೆ. ಚಾಲಕನಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಲಾಯಿತು. ಬಸ್‌ಗಳಲ್ಲಿ ಕರ್ಕಶ ಹಾರ್ನ್ ಬಳಸಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಉಪ ನಿರೀಕ್ಷಕ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.