ದುಮ್ಮಿಕೊಪ್ಪಲು ಗ್ರಾಮಕ್ಕೆ ಬಸ್ ಸೌಲಭ್ಯ

7ark2
ದುಮ್ಮಿಕೊಪ್ಪಲು ಗ್ರಾಮಕ್ಕೆ ಭಾನುವಾರ ಹೊಸದಾಗಿ ಸಂಚಾರ ಆರಂಭಿಸಿದ ಸಾರಿಗೆ ಬಸ್‌ಗೆ ಅರಕಲಗೂಡಿನ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಶ್ರೀಧರ್‌ಗೌಡ, ಹನುಮಂತಪ್ಪ, ಗುರುಮೂರ್ತಿ ಇತರರು ಇದ್ದರು.
Published on

ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಹೋಬಳಿ ದುಮ್ಮಿಕೊಪ್ಪಲು ಗ್ರಾಮಕ್ಕೆ ಭಾನುವಾರ ಸಾರಿಗೆ ಬಸ್ ಸಂಚಾರ ಆರಂಭಗೊಂಡಿದೆ.

ಕಳೆದ ತಿಂಗಳು ಗ್ರಾಮಕ್ಕೆ ಭೇಟಿ ನೀಡಿದ್ದ ಸಮಾಜ ಸೇವಕ ಸಿ.ಡಿ.ದಿವಾಕರಗೌಡ ಅವರು ಗ್ರಾಮಸ್ಥರ ಕೋರಿಕೆ ಮೇರೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದರು. ಇದಾದ ನಂತರ ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಅವರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿ ಬಸ್ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದರು.

ಬಸ್ ಸೌಲಭ್ಯ ಒದಗಿಸುವಂತೆ ಸಲ್ಲಿಸಿದ್ದ ಮನವಿ ಮೇರೆಗೆ ಸರ್ಕಾರ ಆದೇಶ ಹೊರಡಿಸಿದೆ. ದಿನನಿತ್ಯ ಬೆಳಗ್ಗೆ 7ಕ್ಕೆ ಅರಕಲಗೂಡಿನಿಂದ ಸಂತೆಮರೂರು ಮಾರ್ಗವಾಗಿ ದುಮ್ಮಿಕೊಪ್ಪಲಿಗೆ ಬಸ್ ಸಂಚರಿಸಲಿದೆ. ಮತ್ತೆ ಸಂಜೆ 4.30ಕ್ಕೆ ದುಮ್ಮಿಕೊಪ್ಪಲಿಗೆ ತೆರಳಲಿದೆ ಎಂದು ಡಿಪೋ ವ್ಯವಸ್ಥಾಪಕ ಹನುಮಂತಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net