ಗಂಗನದೊಡ್ಡಿ ಗ್ರಾಮಕ್ಕೆ ಬಸ್ ಸೌಕರ್ಯ

14 HANUR 3
ಗಂಗನದೊಡ್ಡಿ ಗ್ರಾಮದಲ್ಲಿ ಬಸ್‌ಗೆ ಪೂಜೆ ಸಲ್ಲಿಸುವ ಮೂಲಕ ಸಾರಿಗೆ ಸಂಚಾರಕ್ಕೆ ಗ್ರಾಮಸ್ಥರು ಚಾಲನೆ ನೀಡಿದರು. ನಾರಾಯಣ್, ಪರಮೇಶ್, ಅಮ್ಜಾದ್‌ಖಾನ್, ರಾಜೇಂದ್ರ, ಪಳನಿಸ್ವಾಮಿ ಇತರರು ಇದ್ದರು.
Published on

ಹನೂರು: ಸಾರಿಗೆ ಸಂಪರ್ಕವೇ ಇಲ್ಲದ ತಾಲೂಕಿನ ಗಂಗನದೊಡ್ಡಿ ಗ್ರಾಮಕ್ಕೆ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸಿದ್ದು, ಗ್ರಾಮಸ್ಥರು ಸಂಭ್ರಮಿಸಿದರು.
ಬಸ್ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ರೈತ ಸಂಘದ ಪದಾಧಿಕಾರಿಗಳು ಗ್ರಾಮದಲ್ಲಿ ಬಸ್‌ಗೆ ಪೂಜೆ ಸಲ್ಲಿಸಿದರು. ಈ ವೇಳೆ ರೈತ ಸಂಘದ ಹನೂರು ಘಟಕ ಅಧ್ಯಕ್ಷ ಅಮ್ಜಾದ್‌ಖಾನ್ ಮಾತನಾಡಿ, ಸೂಳೇರಿಪಾಳ್ಯ ಗ್ರಾಪಂ ವ್ಯಾಪ್ತಿಗೆ ಸೇರಿದ ಗಂಗನದೊಡ್ಡಿ ಗ್ರಾಮಕ್ಕೆ ಬಸ್ ಸೌಕರ್ಯವಿರಲಿಲ್ಲ. ಇದರಿಂದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ನಿತ್ಯ ಪಟ್ಟಣಕ್ಕೆ ತೆರಳಲು ತೊಂದರೆಯಾಗಿತ್ತು. ಬಸ್ ಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು, ರೈತ ಸಂಘಟನೆ ಕಾರ್ಯಕರ್ತರು ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದ್ದರು. ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸಿಕೊಡಲು ಕಾರಣರಾದ ಶಾಸಕರು, ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ರೈತ ಸಂಘದ ಗೌರವಾಧ್ಯಕ್ಷ ರಾಜೇಂದ್ರ, ಉಪಾಧ್ಯಕ್ಷ ಪಳನಿಸ್ವಾಮಿ, ಚಾಲಕ ನಾರಾಯಣ್, ನಿರ್ವಾಹಕ ಪರಮೇಶ್, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net