ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್

Bus hits electric pole
Published on

ಸವಣೂರ: ತಾಂತ್ರಿಕ ದೋಷದಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ರಸ್ತೆ ವಿಭಜಕ ದಾಟಿ ಮತ್ತೊಂದು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.

ತಾಲೂಕಿನ ನದಿನೀರಲಗಿ ಗ್ರಾಮದಿಂದ ಸವಣೂರ ಪಟ್ಟಣಕ್ಕೆ ಆಗಮಿಸುತ್ತಿದ್ದ ಸವಣೂರ ಘಟಕದ ಬಸ್​ನಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ತಕ್ಷಣ ಬಸ್ ಚಾಲಕ ಅಶೋಕ ದಾನಿ ಬಸ್ ನಿಯಂತ್ರಣಕ್ಕೆ ಯತ್ನಿಸಿದ್ದಾರೆ. ಆದರೂ, ರಸ್ತೆ ವಿಭಜಕ ದಾಟಿ ಮತ್ತೊಂದು ಭಾಗದ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್​ನಲ್ಲಿ 75ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಅದೃಷ್ಟಾವಶಾತ್ ಯಾರಿಗೂ ದೊಡ್ಡ ಪೆಟ್ಟಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಬಸ್ ಘಟಕದ ಸಿಬ್ಬಂದಿ ಬಸ್ ತೆರವುಗೊಳಿಸಿದರು. ಈ ಕುರಿತು ಸವಣೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net