ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಬಸ್

7 vpt. 2
ಚಾಲಕನ ನಿಯಂತ್ರಣ ತಪ್ಪಿ ಕಾಪಿ ತೋಟಕ್ಕೆ ನುಗ್ಗಿದ ಬಸ್.
Published on

ವಿರಾಜಪೇಟೆ: ಇಲ್ಲಿನ ಕಾವೇರಿ ಕಾಲೇಜಿನ ಸಮೀಪ ಸೋಮವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದೆ. ಮಡಿಕೇರಿಯಿಂದ ವಿರಾಜಪೇಟೆ ಮೂಲಕ ಕೋಲಾರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಮೂವತ್ತಕ್ಕೂ ಅಧಿಕ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಾಲಕ ಬಸ್ ನಿಯಂತ್ರಿಸಲು ಪ್ರಯತ್ನಪಟ್ಟರೂ ಕಾಫಿ ತೋಟಕ್ಕೆ ನುಗ್ಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಲತಾ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net