ಹಳ್ಳಕ್ಕೆ ಬಿದ್ದ ಬಸ್ 18 ಪ್ರಯಾಣಿಕರಿಗೆ ಗಾಯ

Bus over turned
Published on

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದ ಘಟನೆ ಅಂಕೋಲಾ ಅಗಸೂರು ಬಳಿ ನಡೆದಿದೆ.

ಬೆಳಗಾವಿಯಿಂದ ಯಲ್ಲಾಪುರ-ಅಂಕೋಲಾ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ, ಕಿರು ಸೇತುವೆಗೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಇದ್ದ ಹಳ್ಳಕ್ಕೆ ಬಿದ್ದಿದೆ.

ಸೋಮವಾರ  ಬೆಳಗಿನ ಜಾವ ಸುಮಾರು 3 ಗಂಟೆಗೆ  ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 18 ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಐವರು ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net