ಬಸ್ ವ್ಯವಸ್ಥೆಗೆ ಒತ್ತಾಯಿಸಿ ಠಾಣೆಗೆ ದೂರು

97bc5a564dc746ba95d67649501f06cc
Published on


ಆಲೂರು: ಕಳೆದ ಹಲವು ತಿಂಗಳಿಂದ ಕೆಲ ಬಸ್‌ಗಳು ಆಲೂರು ಪಟ್ಟಣದ ಬಸ್ ನಿಲ್ದಾಣಕ್ಕೆ ಬಾರದೆ ಹೊರಗಿನಿಂದಲೇ ಹೋಗುತ್ತಿವೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಠಾಣೆಗೆ ದೂರು ನೀಡಿದರು.
ದೂರು ಸ್ವೀಕರಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಗಂಗಾಧರ್, ಸಾರಿಗೆ ಅಧಿಕಾರಿಯೊಂದಿಗೆ ದೂರವಾಣಿಯ ಮೂಲಕ ಚರ್ಚಿಸಿ ಇನ್ನು ಮೂರು ದಿನಗಳೊಳಗಾಗಿ ಸಮಸ್ಯೆ ಪರಿಹರಿಸದಿದ್ದರೆ ಕಾನೂನು, ಸುವ್ಯವಸ್ಥೆಗೆ ಧಕ್ಕೆ ಆಗಲಿದೆ. ಇದಕ್ಕೆ ನೀವೇ ಹೊಣೆಯಾಗಬೇಕಾಗುತ್ತದೆ ಎಂದರು. ಶೀಘ್ರ ಸಮಸ್ಯೆ ಬಗೆಹರಿಸಿಕೊಡುವುದಾಗಿ ಸಾರ್ವಜನಿಕರಿಗೆ ಹಾಗೂ ವಿವಿಧ ಸಂಘಟನೆಗಳ ಮುಖಂಡರಿಗೆ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net