ನಂಜನಗೂಡಿನಲ್ಲಿ ಎಂದಿನಂತೆ ಬಸ್ ಸಂಚಾರ

Oplus_16908288
ಸಾರಿಗೆ ನೌಕರರ ಮುಷ್ಕರದ ನಡುವೆ ನಂಜನಗೂಡಿನಲ್ಲಿ ಎಂದಿನಂತೆ ಬಸ್ ಸಂಚಾರ ಇತ್ತು.
Published on

ನಂಜನಗೂಡು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಒಕ್ಕೂಟಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರವಿಲ್ಲದೆ ಬಹುತೇಕ ಸ್ತಬ್ಧಗೊಂಡಿತ್ತು. ಆದರೆ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಬಸ್‌ಗಳು ಎಂದಿನಂತೆ ಸಂಚರಿಸಿವೆ.

ಮಂಗಳವಾರ ಬೆಳಗ್ಗೆಯಿಂದ ನಂಜನಗೂಡು ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಸಾರಿಗೆ ಬಸ್‌ಗಳು ಸಂಚಾರ ನಡೆಸಿದವು. ನೌಕರರ ಮುಷ್ಕರದಿಂದ ಬಸ್ ಸಂಚಾರ ಬಂದ್ ಆಗುವ ಮುನ್ಸೂಚನೆ ಇರುವುದರಿಂದ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಬಾರದೆ ಗೈರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net