

ನಾಪೋಕ್ಲು: ಹೊದ್ದೂರು ಗ್ರಾಮ ಪಂಚಾಯಿತಿಯ ಪಾಲೇಮಾಡು ಗ್ರಾಮಸ್ಥರ ಮನವಿ ಸ್ಪಂದಿಸಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೇವೆ ಪ್ರಾರಂಭಿಸಿದ್ದಾರೆ.
ಪಾಲೇಮಾಡು ಗ್ರಾಮದ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಪಟ್ಟಣ ಸೇರಿದಂತೆ ಇನ್ನಿತರ ಕಡೆಗಳಿಗೆ ತೆರಳಲು ಸಮಸ್ಯೆ ಅನುಭವಿಸುತ್ತಿದ್ದರು. ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಜನಸಂಪರ್ಕ ಸಭೆಯಲ್ಲಿ ಶಾಸಕ ಮಂತರ್ ಗೌಡ ಅವರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಮುತುವರ್ಜಿ ವಹಿಸಿ ಪಾಲೇಮಾಡು ಗ್ರಾಮಕ್ಕೆ ಮೊದಲ ಬಾರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದ್ದು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ಗ್ರಾಮದಿಂದ ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ದಿನ ಬೆಳಗ್ಗೆ 7.45 ಹಾಗೂ ಸಂಜೆ 5 ಗಂಟೆಗೆ ಬಸ್ ಸೇವೆ ಲಭ್ಯವಾಗಲಿದೆ.
ಹೊದ್ದೂರು ಗ್ರಾ.ಪಂ.ಅಧ್ಯಕ್ಷರು ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ , ಗ್ರಾ.ಪಂ.ಉಪಾಧ್ಯಕ್ಷೆ ಅನುರಾಧಾ, ಸದಸ್ಯರಾದ ಕುಸುಮಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ಮೊಣ್ಣಪ್ಪ, ಪಂಚಾಯಿತಿ ಸದಸ್ಯ ಹಮೀದ್ ಕಬಡಕ್ಕೇರಿ, ಲಕ್ಷ್ಮೀ ಹಾಗೂ ಗ್ರಾಮಸ್ಥರು ಹಾಜರಿದ್ದರು.