

ಕುಕನೂರು: ತಾಲೂಕಿನ ದ್ಯಾಂಪೂರ ಗ್ರಾಮದಲ್ಲಿ ಮೂರು ವರ್ಷಗಳ ಹಿಂದೆ ಬಸ್ ನಿಲ್ದಾಣದ ಜಾಗವನ್ನು ಕೆಲವರು ಅತಿಕ್ರಮಣ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೋಲಿಸ್‌ರ ಬಂದೋಬಸ್ತ್‌ನಲ್ಲಿ ಸೋಮವಾರ ತೆರವುಗೊಳಿಸಿದರು. ಮೂರು ದಶಕಗಳ ಹಿಂದೆ ಬಸ್ ನಿಲ್ದಾಣ ನಿರ್ಮಿಸಲಾಗಿತ್ತು.
ಕೆಲವರು ರಾಜಕೀಯ ಪ್ರಭಾವ ಬಳಸಿ ರಾತ್ರೋರಾತ್ರಿ ಬಸ್ ನಿಲ್ದಾಣ ಕೆಡವಿ ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದರು. ಶಾಸಕ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಅದೇ ಸ್ಥಳದಲ್ಲಿ ನೂತನ ಬಸ್ ನಿಲ್ದಾಣಕ್ಕಾಗಿ 59 ಲಕ್ಷ ರೂ. ರಾಜ್ಯ ಸರ್ಕಾರದಿಂದ ಮಂಜೂರು ಮಾಡಿಸಿದ್ದಾರೆ.
ಜಾಗ ಒತ್ತುವರಿ ಮಾಡಿಕೊಂಡ ಅಂಗಡಿ ಮಾಲೀಕರಿಗೆ ಮೂರು ಬಾರಿ ನೋಟಿಸ್ ನೀಡಿ ಇಂದು ಅಧಿಕೃತವಾಗಿ ತೆರವುಗೊಳಿಸಿದರು. ಸಿಪಿಐ ಮೌನೇಶ್ವರ ಪಾಟೀಲ್, ಪಿಎಸ್‌ಐ ಟಿ.ಗುರುರಾಜ ಇತರರಿದ್ದರು.