ದಾರಂದಕುಕ್ಕು ಬಸ್ ತಂಗುದಾಣ ಪರಿಶೀಲನೆ - ಅಪಘಾತಕ್ಕೆ ಕಾರಣವಾಗುತ್ತಿರುವ ದೂರಿನ ಹಿನ್ನೆಲೆ

PTR_23 OCT_3
Published on

ಪುತ್ತೂರು: ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಪ್ರಯಾಣಿಕರ ತಂಗುದಾಣ ವಿಚಾರದಲ್ಲಿ ಸಹಾಯಕ ಆಯುಕ್ತ ನೇತೃತ್ವದಲ್ಲಿ ವಿವಿಧ ಇಲಾಖೆಗಳಿಂದ ಪರಿಶೀಲನೆ ನಡೆಸಲಾಯಿತು.

ಪುತ್ತೂರು-ಉಪ್ಪಿನಂಗಡಿ ಮುಖ್ಯರಸ್ತೆಯ ದಾರಂದಕುಕ್ಕುವಿನಲ್ಲಿ ರಸ್ತೆ ಬದಿಯಲ್ಲಿರುವ ಪ್ರಯಾಣಿಕರ ತಂಗುದಾಣ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕ ದೂರು ನೀಡಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಸೂಕ್ತ ಮಾಹಿತಿ ನೀಡುವಂತೆ ಜಿಲ್ಲಾಽಕಾರಿಗಳು ಸಹಾಯಕ ಆಯುಕ್ತರಿಗೆ ಆದೇಶಿದ್ದರು. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಭೂಮಾಪನ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಽಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಹಜರು ನಡೆಸಿದರು.

ತಹಸೀಲ್ದಾರ್ ಪುರಂದರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಽಕಾರಿ ನವೀನ್ ಭಂಡಾರಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜರಾಮ್, ಸಹಾಯಕ ಇಂಜಿನಿಯರ್ ಪ್ರಮೋದ್, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭರತ್ ಬಿ.ಎಂ., ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ ಮೂರ್ತಿ, ಕಂದಾಯ ನಿರೀಕ್ಷಕ ಚಂದ್ರ ನಾಯ್ಕ, ಬನ್ನೂರು ಪಿಡಿಒ ಚಿತ್ರಾವತಿ, ಗ್ರಾಮ ಆಡಳಿತಾಽಕಾರಿ ಕವಿತಾ ಉಪಸ್ಥಿತರಿದ್ದರು.

ಸ್ಥಳದಲ್ಲಿ ಜನ ಜಮಾವಣೆ:

ಸಹಾಯಕ ಆಯುಕ್ತರು ಸ್ಥಳ ಪರಿಶೀಲನೆಗೆ ಭೇಟಿ ನೀಡುವ ಬಗ್ಗೆ ಮಾಹಿತಿ ಪಡೆದ ಕೋಡಿಂಬಾಡಿ, ಚಿಕ್ಕಮುಡ್ನೂರು, ಬೆಳ್ಳಿಪ್ಪಾಡಿ ಗ್ರಾಮಗಳ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಬನ್ನೂರು ಗ್ರಾ.ಪಂ ಅಧ್ಯಕ್ಷೆ ಸ್ಮಿತಾ, ಉಪಾಧ್ಯಕ್ಷ ಶೀನಪ್ಪ ಕುಲಾಲ್, ಸದಸ್ಯರಾದ ರಾಘವೇಂದ್ರ, ತಿಮ್ಮಪ್ಪ ಪೂಜಾರಿ, ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ತಾ.ಪಂ ಮಾಜಿ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ನೆಕ್ಕಿಲಾಡಿ ಗ್ರಾ.ಪಂ ಸದಸ್ಯ ಪ್ರಶಾಂತ್ ಸೇರಿದಂತೆ ಮೂರು ಗ್ರಾಮಗಳ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು.

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ವಿವಿಧ ಇಲಾಖೆಯ ಅಽಕಾರಿಗಳೊಂದಿಗೆ ಜಂಟಿ ತನಿಖೆ ನಡೆಸಲಾಗಿದ್ದು, ವಾಸ್ತವಾಂಶ ತಿಳಿದುಕೊಳ್ಳಲಾಗಿದೆ. ಸ್ಥಳೀಯರ ಮೂಲಕ ಮಹಜರು ಮಾಡಿ ಮುಂದಿನ ಕ್ರಮಕ್ಕಾಗಿ ಜಿಲ್ಲಾಽಕಾರಿಗಳಿಗೆ ಕಳುಹಿಸಲಾಗುವುದು. ಈ ಹಿಂದೆ ರಚಿಸಿದ ಸಮಿತಿ ರಚಿಸಲಾಗಿದ್ದು, ಅದರ ಒಂದು ವರದಿಯನ್ನು ನೀಡಲಾಗಿದೆ. ಈಗ ಮತ್ತೆ ಜಿಲ್ಲಾಽಕಾರಿಗಳು ಆದೇಶ ಮಾಡಿದ್ದು ತನಿಖೆ ನಡೆಸಿ ವರದಿ ನೀಡಲಿದ್ದೇವೆ.

| ಜುಬಿನ್ ಮೊಹಾಹಪಾತ್ರ

ಸಹಾಯಕ ಆಯುಕ್ತರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net