ಹೆದ್ದಾರಿ ಮತ್ತೊಂದು ಬದಿಗೆ ನುಗ್ಗಿದ ಬಸ್

Published on

ಶಿಗ್ಗಾಂವಿ: ಚಾಲಕನ ನಿಯಂತ್ರಣ ತಪ್ಪಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹೆದ್ದಾರಿಯ ಮತ್ತೊಂದು ಬದಿಗೆ ನುಗ್ಗಿದ ಘಟನೆ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.

ಹುಬ್ಬಳ್ಳಿಯಿಂದ ಹಾನಗಲ್ಲ ಕಡೆಗೆ ಸಂಚರಿಸುವಾಗ ಪಟ್ಟಣದ ಹೊರವಲಯದಲ್ಲಿರುವ ಶ್ರೀರಂಭಾಪುರಿ ಮಹಾವಿದ್ಯಾಲಯದ ಬಳಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು, ಮತ್ತೊಂದು ಬದಿಗೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net