ಬಸ್‌ ಟ್ಯಾಂಕರ್‌ ಡಿಕ್ಕಿ ಇಬ್ಬರು ಸಾವು

Accident
Published on

ಅಂಕೋಲಾ: ಟ್ಯಾಂಕರ್ ಹಾಗೂ ಸಾರಿಗೆ ಸಂಸ್ಥೆಯ ಬಸ್ ನಡುವೆ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಂಕೋಲಾ ಅಡ್ಲೂರು ತರಂಗ ಹೋಟೆಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 9 ಜನ ತೀವ್ರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಮಕ್ಕಿಗದ್ದೆಯಿಂದ ಅಂಕೋಲಾಕ್ಕೆ ಬರುವ ಎನ್‌ಡಬ್ಲುಕೆಆರ್‌ಟಿಸಿ ಬಸ್ ಹಾಗೂ ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಎರಡೂ ವಾಹನಗಳ ಎದುರಿನ ಭಾಗ ನುಜ್ಜುಗುಜ್ಜಾಗಿದ್ದು, ಬಸ್ ಪಲ್ಟಿಯಾಗಿದೆ.

ಟ್ಯಾಂಕರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಹೆಸರು ತಿಳಿದುಬಂದಿಲ್ಲ. ಬಸ್‌ನ ಪ್ರಯಾಣಿಕ ಕೇಣಿ ಗ್ರಾಮದ ಭಾಸ್ಕರ ಪಾಂಡುರAಗ ಗಾಂವಕರ್(56) ಮೃತರು. ಬಸ್ ಚಾಲಕನ ಕಾಲು ತಂಡಾಗಿದೆ. ಅಲ್ಲದೇ ಇತರ 8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ಕರೆತರಲಾಗಿದೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿದೆ. ಅಂಕೋಲಾ ಪೊಲೀಸರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net