ಬಸ್ ಸಂಚಾರ ತಡೆದು ಪ್ರತಿಭಟನೆ

bus
ಹೂವಿನಹಡಗಲಿಯ ಹೊಸಹಳ್ಳಿಯಲ್ಲಿ ವಿದ್ಯಾರ್ಥಿಗಳು ಮತ್ತು ಗ್ರಾಮಮಸ್ಥರು ಸಮರ್ಪಕವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಗ್ರಾಮದ ಮುಖಂಡರಾದ ಪಾಲಾಕ್ಷಪ್ಪ, ಶಿವಪುತ್ರಪ್ಪ, ದೇವರಾಜ, ಪಟದಯ್ಯ, ರಮೇಶ, ಪಾಲಾಕ್ಷ ಹಾಗೂ ಶಾಲೆ-ಕಾಲೇಜು ವಿದ್ಯಾರ್ಥಿಗಳು ಇದ್ದರು.
Published on

ಹೂವಿನಹಡಗಲಿ: ತಾಲೂಕಿನ ಹೊಸಹಳ್ಳಿಯಲ್ಲಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಬುಧವಾರ ಸಾರಿಗೆ ಘಟಕದ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಹರಸಾಹಸ

ತಾಲೂಕಿನ ಕೋಟಿಹಾಳ, ಅಂಗೂರು, ಹೊಸಹಳ್ಳಿ, ಮಾಗಳ, ಶಿವಪುರ, ತಿಪ್ಪಾಪುರ ಗ್ರಾಮಗಳ ವಿದ್ಯಾರ್ಥಿಗಳನ್ನು ಹಾಗೂ ಗ್ರಾಮಸ್ಥರನ್ನು ಪ್ರತಿನಿತ್ಯ ತಾಲೂಕು ಕೇಂದ್ರಕ್ಕೆ ಕರೆತರು ಬಸ್‌ಗಳ ವ್ಯವಸ್ಥೆ ಸಮರ್ಪಕವಾಗಿಲ್ಲದಿದ್ದರೂ ಬರುವ ಒಂದೇ ಒಂದು ಸಾರಿಗೆ ವಾಹನದಲ್ಲಿ ಈ ಎಲ್ಲ ಗ್ರಾಮಗಳ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಹರಸಾಹಸ ಮಾಡಿ ಪಟ್ಟಣಕ್ಕೆ ಬರುತ್ತಾರೆ.

ಇತ್ತೀಚಿಗೆ ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಮಾರ್ಗದಲ್ಲಿ ಸಂಚರಿಸುವ ಸಾರಿಗೆ ವಾಹನದ ಮಾರ್ಗವನ್ನು ಹೆಚ್ಚುವರಿಯಾಗಿ ಮಕರಬ್ಬಿ ಗ್ರಾಮದವರೆಗೂ ವಿಸ್ತರಿಸಿದ್ದಾರೆ. ಆದರೆ ಸಾರಿಗೆ ವಾಹನ ಮಕರಬ್ಬಿ ಗ್ರಾಮದಲ್ಲಿಯೇ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಈ ವಾಹನದಲ್ಲಿ ಅರ್ಧ ತುಂಬಿಕೊಳ್ಳುತ್ತಾರೆ.

ಬಸ್‌ನಲ್ಲಿ ಕೋಟಿಹಾಳ, ಅಂಗೂರು, ಹೊಸಹಳ್ಳಿ, ಮಾಗಳ, ಶಿವಪುರ, ತಿಪ್ಪಾಪುರ ಗ್ರಾಮಗಳ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಬಸ್‌ನಲ್ಲಿ ಸಂಚರಿಸಲು ಸ್ಥಳಾವಕಾಶ ದೊರಕುತ್ತಿಲ್ಲ. ಈ ಕುರಿತು ಸಾಕಷ್ಟು ಬಾರಿ ಸಾರಿಗೆ ಇಲಾಖೆಯ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಹೊಸಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಗ್ರಾಮಸ್ಥರು ಬಸ್ ಸಂಚಾರ ತಡೆದು ಪ್ರತಿಭಟಿಸಿ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net