ಬಸ್ ಸಂಚಾರ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

karave
ಮಸ್ಕಿ ಬಸ್ ನಿಲ್ದಾಣದಲ್ಲಿ ಸೋಮವಾರ ಹಾಲಾಪುರಕ್ಕೆ ಸಮರ್ಪಕ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
Published on

ವಿಜಯವಾಣಿ ಸುದ್ದಿಜಾಲ ಮಸ್ಕಿ


ತಾಲೂಕಿನ ಹಾಲಾಪುರ ಗ್ರಾಮದಲ್ಲಿ ಬಸ್ ಸಂಚಾರ ತಡೆದು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಶಾಲಾ ವಿದ್ಯಾರ್ಥಿಗಳನ್ನು ಬಸ್‌ನಲ್ಲಿ ಹತ್ತಿಸಿಕೊಳ್ಳುತ್ತಿಲ್ಲ, ಹೀಗಾಗಿ ಶಾಲಾ ವೇಳೆಗೆ ಹೋಗಲು ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಸ್ಕಿ ಸಾರಿಗೆ ಘಟಕದಿಂದ ಬಸ್‌ಗಳನ್ನು ಕಡಿಮೆಗೊಳಿಸಲಾಗಿದ್ದು, ಮಾಸ್ಕಿ-ಕವಿತಾಳ ಮಾರ್ಗದಲ್ಲಿ ಬರುವ ಬಸ್‌ಗಳು ಶಾಲಾ ಕಾಲೇಜು ವೇಳೆಗೆ ಬಸ್ ಬಿಡುತ್ತಿಲ್ಲ.

ಮಸ್ಕಿ-ರಾಯಚೂರು, ಮಸ್ಕಿ-ಕವಿತಾಳ, ಮಸ್ಕಿ-ದೇವದುರ್ಗ ಮಾರ್ಗಗಳಲ್ಲಿ ವಿದ್ಯಾರ್ಥಿಗಳಿದ್ದಲ್ಲಿ ಬಸ್ ನಿಲ್ಲಿಸುತ್ತಿಲ. ಬೆಳಗ್ಗೆ 7ಗಂಟೆಯಿಂದಲೇ ಮಸ್ಕಿ-ಕವಿತಾಳ ಮಾರ್ಗದ ಎಲ್ಲ ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕವಿತಾಳ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಮನವೊಲಿಸಲು ಯತ್ನಿಸಿದರೂ ಪಟ್ಟು ಬಿಡದ ವಿದ್ಯಾರ್ಥಿಗಳು, ಸಾರಿಗೆ ಘಟಕದ ವ್ಯವಸ್ಥಾಪಕರು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ನಂತರ ಬಂದ ಡಿಪೋ ಮ್ಯಾನೇಜರ್ ಆದಪ್ಪ ಕುಂಬಾರ್ ವಿದ್ಯಾರ್ಥಿಗಳ ಮನವೊಲಿಸಿ ಸಮರ್ಪಕ ಬಸ್ ಬಿಡುವ ವ್ಯವಸ್ಥೆ ಕೈಗೊಳ್ಳುವುದಾಗಿ ತಿಳಿಸಿದ್ದರಿಂದ ಪ್ರತಿಭಟನೆ ಹಿಂದಕ್ಕೆ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net