ಬಸ್-ದ್ವಿಚಕ್ರ ವಾಹನ ಡಿಕ್ಕಿ

Bike Accident
Published on

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಇಳಂತಿಲ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ದ್ವಿಚಕ್ರ ವಾಹನ ಸವಾರ ಸಿ.ಸಿ. ಪೌಲೋಸ್ (72) ಹಾಗೂ ಹಿಂಬದಿ ಸವಾರೆ ಜಯಲಕ್ಷ್ಮಿ(64) ಎಂಬಿಬ್ಬರು ಗಂಭೀರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ನವೀನ್ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net