ಬಸ್ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಒತ್ತಾಯ

20-msk-2
Published on

ಮಸ್ಕಿ: ಮಸ್ಕಿಯಿಂದ ಲಿಂಗಸುಗೂರಿಗೆ ತೆರಳಲು ಬಸ್‌ಗಳು ವಿಳಂಬ ಮಾಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ಪದಾಧಿಕಾರಿಗಳ ಜತೆ ಸೇರಿ ವಿದ್ಯಾರ್ಥಿಗಳು ಸೋಮವಾರ ಹಳೇ ಬಸ್‌ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.

ಡಿಪೊ ವ್ಯವಸ್ಥಾಪಕ ಆದಪ್ಪಗೆ ಸಂಘಟನೆಯ ತಾಲೂಕು ಅಧ್ಯಕ್ಷ ವೀರಭಧ್ರ ಕೊಠಾರಿ ಮತ್ತು ಮುಖಂಡರು ಮನವಿ ಸಲ್ಲಿಸಿದರು. ಪ್ರತಿನಿತ್ಯ ಒಂದಲ್ಲ ಒಂದು ಬಸ್‌ನಲ್ಲಿ ವಿದ್ಯಾರ್ಥಿಗಳಿಗೆ ಡ್ರೈವರ್-ಕಂಡಕ್ಟರ್‌ಗಳು ಕಿರಿಕಿರಿ ಮಾಡುತ್ತಾರೆ. ವಿದ್ಯಾರ್ಥಿಗಳನ್ನು ಸಾರ್ವಜನಿಕ ಪ್ರಾಯಣಿಕರ ಮಂದೆಯೆ ಬೈಯುತ್ತಾರೆ. ಕೂಡಲೇ ಅಸಭ್ಯವಾಗಿ ವರ್ತಿಸದಂತೆ ಅವರಿಗೆ ತಾಕೀತು ಮಾಡಬೇಕು. ಸಮಯಕ್ಕೆ ಸರಿಯಾಗಿ ಬಸ್ ಬಿಡಬೇಕು. ಈ ಕುರಿತು ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಲಾಗಿದೆ. ಮನವಿ ಸ್ವೀಕರಿಸಿದ ಡಿಪೊ ವ್ಯವಸ್ಥಾಪಕ ಆದಪ್ಪ, ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net