ಕಾನೂನು ಸಾಕ್ಷರತೆ ಇದ್ದರೆ ರಾಷ್ಟ್ರ ಸುಭಿಕ್ಷ

web
Published on

ಚಿಕ್ಕಮಗಳೂರು: ಕಾನೂನು ಸಾಕ್ಷರತೆ ಇರುವ ರಾಷ್ಟ್ರ ಸುಭಿಕ್ಷವಾಗಿರುತ್ತದೆ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಎಸ್.ವೆಂಕಟೇಶ್ ಹೇಳಿದರು.

ವಾರ್ತಾ ಭವನದಲ್ಲಿ ಜಿಲ್ಲಾಡಳಿತ ಹಾಗೂ ಆಹಾರ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯಲ್ಲಿ ಗ್ರಾಹಕರ ಸಂರಕ್ಷಣಾ ಕಾಯ್ದೆ ಕುರಿತು ಉಪನ್ಯಾಸ ನೀಡಿ, 1986ರ ಗ್ರಾಹಕರ ಕಾಯ್ದೆಗೆ ಇನ್ನಷ್ಟು ಶಕ್ತಿ ತುಂಬಿ ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ 2019ರಲ್ಲಿ ತಿದ್ದಪಡಿ ಕಾಯ್ದೆ ಜಾರಿ ತರಲಾಗಿದೆ ಎಂದರು.

ವಕೀಲರ ಸಂಘದ ಕಾರ್ಯದರ್ಶಿ ಡಿ.ಬಿ.ಸುಜೇಂದ್ರ ಮಾತನಾಡಿ, ವ್ಯವಹಾರದಲ್ಲಿ ಮೋಸಹೋದರೆ ಗ್ರಾಹಕರ ಹಿತರಕ್ಷಣೆ ಮಾಡುವ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಥಾಮಸ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪ ನಿರೀಕ್ಷಕ ಬಿ.ಆರ್.ಕೃಷ್ಣಮೂರ್ತಿ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಪ್ರಸನ್ನ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net