ವ್ಯವಹಾರ ಸ್ಥಗಿತಗೊಳಿಸಿ ಕಾರ್ಯಕ್ರಮದಲ್ಲಿ ಭಾಗಿ

Published on

ಕಂಪ್ಲಿ: ಇಲ್ಲಿನ ವಾಸವಿ ಕಲ್ಯಾಣ ಮಂಟಪದಲ್ಲಿ ಆರ್ಯವೈಶ್ಯ ಸಂಘ ಬುಧವಾರ ಹಮ್ಮಿಕೊಂಡಿದ್ದ ವಾಸವಿ ಜಯಂತ್ಯುತ್ಸವ ಶ್ರದ್ಧೆ-ಭಕ್ತಿಗಳಿಂದ ನಡೆಯಿತು. ಬೆಳಗ್ಗೆ ನಗರೇಶ್ವರಸ್ವಾಮಿ, ಕನ್ಯಕಾಪರಮೇಶ್ವರಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಡೆಯಿತು.

ನಂತರ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ನಾನಾ ಕ್ರೀಡೆಗಳಲ್ಲಿ ವಿಜೇತರು ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಸೇರಿದಂತೆ ನಾನಾ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಬಹಮಾನ ವಿತರಿಸಲಾಯಿತು. ಆರ್ಯವೈಶ್ಯ ಸಮುದಾಯದವರು ವ್ಯವಹಾರ ಸ್ಥಗಿತಗೊಳಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆರ್ಯವೈಶ್ಯ ಸಮಾಜದ ಅಧ್ಯಕ್ಷ ಡಿ.ವಿ.ಸುಬ್ಬರಾವ್, ಧರ್ಮಕರ್ತ ಎಣ್ಣಿ ಚಂದ್ರಮೋಹನಶ್ರೇಷ್ಠಿ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಬಿ.ಕೋಟೇಶ್ವರ, ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಟಿ. ರಮಾದೇವಿ ವೆಂಕಟರಮಣ, ವಾಸವಿ ಯುವಜನ ಸಂಘದ ಅಧ್ಯಕ್ಷ ಡಿ.ಮಂಜೇಶ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಡಿ.ಶ್ರೀಧರಶ್ರೇಷ್ಠಿ, ಚಿಕ್ಕಜಂತಕಲ್ಲಿನ ಗಾಯಕ ನರಸಿಂಹಮೂರ್ತಿ, ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಜಿ.ರಾಜರಾವ್, ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ನಿರ್ದೇಶಕ ಜಗದೀಶ ಕಾಕುಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net