ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟ ಬೆಂಗಳೂರಿನ Businessman

Pradeep Deceased
Published on

ಬೆಂಗಳೂರು: ಕಾರಿನೊಳಗೆ ಕುಳಿತು ಉದ್ಯಮಿಯೊಬ್ಬರು (Businessaman) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ಪ್ರದೀಪ್​ (42) ಎಂದು ಗುರುತಿಸಲಾಗಿದ್ದು, ಇವರು ನಾಗರಭಾವಿಯ ನಿವಾಸಿ ಎಂದು ತಿಳಿದು ಬಂದಿದೆ. ಹೋಟೆಲ್‌ ಉದ್ಯಮದಲ್ಲಿ ಪ್ರದೀಪ್‌ (Businessman) ನಷ್ಟ ಅನುಭವಿಸಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Pradeep Deceased

ಘಟನೆಯ ಕುರಿತು ಮಾಹಿತಿ ನೀಡಿರುವ ಡಿಸಿಪಿ ಗಿರೀಶ್, ಶನಿವಾರ (ನವೆಂಬರ್​ 16) ಮಧ್ಯಾಹ್ನ 02 ಗಂಟೆ ಸುಮಾರಿಗೆ ಸ್ಕೋಡಾ ಕಾರಿನಲ್ಲಿ ಪ್ರದೀಪ್​ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಗೆ ಬಂದಿದ್ದು, ಕಾರಿನಲ್ಲಿ ಕುಳಿತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸ್​ ಅಧಿಕಾರಿಗಳು ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಸುಟ್ಟು ಭಸ್ಮವಾಗಿದ್ದು, ಮೃತದೇಹ ಗುರುತು ಸಿಗದಂತಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬಿಎನ್‌ಎಸ್‌ಎಸ್ ಸೆಕ್ಷನ್ 194 ರ ಅಡಿಯಲ್ಲಿ ಬ್ಯಾಡರಹಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಗಿರೀಶ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net