ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ಬಸ್ ಗಾಗಿ ಪ್ರತಿಭಟನೆ

IMG-20241014-WA0002.jpg
Published on

ಬೆಳಗಾವಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪರ್ಧಿಸುವ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಸಾರಿಗೆ ಬಸ್ ಗಾಗಿ ಜನ ಪ್ರತಿಭಟನೆ ನಡೆಸುತ್ತಿದ್ದಾರೆ.

ಯಮಕನಮರಡಿ ಕ್ಷೇತ್ರದ ಹುದಲಿ ಗ್ರಾಮದಲ್ಲಿ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಹಾಗೂ ಬೆಳಗಾವಿ- ಗೋಕಾಕ ತಡೆ ರಹಿತ ಬಸ್ ಗಳನ್ನು ನಿಲ್ಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗಾವಿ ತಾಲೂಕುನ ಹುದಲಿ ಗ್ರಾಮದಲ್ಲಿ ಏಕಾಏಕಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಸರ್ಕಾರಿ, ಖಾಸಗಿ ಕಂಪನಿಗಳ ನೌಕರರು, ವಿದ್ಯಾರ್ಥಿಗಳು ಸಮಸ್ಯೆ ಸಿಲುಕಿದ್ದಾರೆ. ಮತ್ತೊಂದೆಡೆ ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಸಮಸ್ಯೆ ಉದ್ಬವಿಸಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net