

ಕೊಳ್ಳೇಗಾಲ: ಪಟ್ಟಣದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ನಾಲ್ಕನೇ ಶನಿವಾರದ ಪ್ರಯುಕ್ತ ವಿಶೇಷ ಪೂಜೆಗಳು ನಡೆದವು.
ಬೆಳಗ್ಗೆ ಪಂಚಾಮೃತ ಅಭಿಷೇಕ, ನೈವೇದ್ಯ ಮಹಾಮಂಗಳಾರತಿ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ನವನೀತ ಕೃಷ್ಣ ಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಯಿತು. ವಿವಿಧ ಹೂಗಳಿಂದ ಶೃಂಗರಿಸಲಾಗಿತ್ತು. ಸಂಜೆ ಶ್ರೀ ಸ್ವಾಮಿಗೆ ವಿಶೇಷವಾಗಿ ದೊಡ್ಡ ಗರುಡ ವಾಹನ ಮಾಡಿ ಪೂಜೆ ಸಲ್ಲಿಸಲಾಯಿತು.
ತಾಲೂಕಿನ ವಿವಿಧ ಗ್ರಾಮಗಳ ಜನರು ಹಾಗೂ ಪಟ್ಟಣ ನಿವಾಸಿಗಳು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಾಲಯ ಎಲ್ಲ ಪೂಜಾ ಕೈಂಕರ್ಯಗಳನ್ನು ಅರ್ಚಕ ಸುದರ್ಶನ್ ಭಟ್ ನೆರವೇರಿಸಿದರು.