ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ
Published on

ಹನೂರು: ತಾಲೂಕಿನ ಬಂಡಳ್ಳಿಯಿಂದ ಹನೂರಿನವರೆಗೆ ಕೈಗೊಂಡಿರುವ ರಸ್ತೆಯಲ್ಲಿನ ಗುಂಡಿ ಮುಚ್ಚುವ ಕಾರ್ಯದ ಸ್ಥಳಕ್ಕೆ ಬುಧವಾರ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು.

ಹಲವು ವರ್ಷಗಳಿಂದ ಹನೂರಿನಿಂದ ಬಂಡಳ್ಳಿ ಗ್ರಾಮದವರೆಗೆ ರಸ್ತೆ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ರಸ್ತೆ ಅಭಿವೃದ್ಧಿ ಪಡಿಸಲು ಗ್ರಾಮಸ್ಥರು ಹಲವು ಸಮಯದಿಂದ ಒತ್ತಾಯ ಮಾಡುತ್ತಾ ಬಂದಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.

ಮುಖಂಡರಾದ ಮಹದೇವಸ್ವಾಮಿ, ಮಾದೇಶ್, ಮಂಜೇಶ್, ಶ್ರೀರಂಗ, ಗೋಪಾಲ್, ಅತಿಕ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net