ಗುಣಮಟ್ಟದ ಶಿಕ್ಷಣಕ್ಕೆ ಬಿವಿವಿ ಸಂಘ ಆದ್ಯತೆ

BVV Sangha gives priority to quality education
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಗಲಕೋಟೆ ಬಿವಿವಿ ಸಂಘದ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶನಿವಾರ ಸಂಘದ ಮಿನಿ ಸಭಾಭವನದಲ್ಲಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಸನ್ಮಾನಿಸಿದರು. ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಇದ್ದರು.
Published on

ಬಾಗಲಕೋಟೆ: ಬಾಗಲಕೋಟೆಯ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘವು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತ ಬಂದಿದೆ. ಇದರಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆಂದು ಬಿ.ವಿ.ವಿ. ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.

ಸಂಘದ ಮಿನಿ ಸಭಾಭವನದಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿ, ಪ್ರಸಕ್ತ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರಿಕ್ಷೇಯಲ್ಲಿ ಸಂಘದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು ಹೆಮ್ಮೆಯ ವಿಷಯವಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅಗತ್ಯ ಇರುವ ಎಲ್ಲ ರೀತಿಯ ಆಧುನಿಕ ತಂತ್ರಜ್ಞಾನದ ಸೌಲಭ್ಯಗಳನ್ನು ಒದಗಿಸುತ್ತ ಬಂದಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ದೇಶದ ಉತ್ತಮ ಪ್ರಜೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ನುರಿತ ಶಿಕ್ಷಕ ವರ್ಗದಿಂದ ಮಾರ್ಗದರ್ಶನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಿ ಉತ್ತಮ ಅಂಕ ಪಡೆದುಕೊಂಡು ತಮಗೂ, ತಮ್ಮ ಕುಟುಂಬದ ಜೊತೆಗೆ ಕಲಿತ ಸಂಸ್ಥೆಗೂ ಒಳ್ಳೆಯ ಹೆಸರು ತರಬೇಕು. ನಾಡಿಗೆ ಉತ್ತಮ ಪ್ರಜೆಗಳಾಗಬೇಕು ಎಂದು ಸಲಹೆ ನೀಡಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಪ್ರಾಚಾರ್ಯ ಕೆ.ಎಚ್. ಹೊಸೂರ ಅನೇಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಸನ್ಮಾನ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಬಸವೇಶ್ವರ ಪ್ರೌಢಶಾಲೆಯ ವೈಷ್ಣವಿ ಪೂಜಾರ, ಸಂಜನಾ ಸುರಮುಂಜಿ, ಅನಗವಾಡಿ ಬಸವೇಶ್ವರ ಪ್ರೌಡಶಾಲೆಯ ವೀಣಾ ಹಿರೇಮಠ, ಬಾಗಲಕೋಟೆಯ ಬಸವೇಶ್ವರ ಶಿಶುವಿಹಾರದ ಸ್ನೇಹಾ ಗಿರಗಾಂವಿ, ಪ್ರಗತಿ ಕುಲಕರ್ಣಿ, ವಿದ್ಯಾಗಿರಿಯ ಬಸವೇಶ್ವರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ವಿನುತಾ ಗಂಗಲ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net