ಜಲಮಂಡಳಿಯಿಂದ ಮೇ 31ರಂದು ಫೋನ್​ ಇನ್​ ಕಾರ್ಯಕ್ರಮ; ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶ

BWSSB
Published on

ಬೆಂಗಳೂರು: ಬೆಂಗಳೂರು ಜಲಮಂಡಳಿ ವತಿಯಿಂದ ಶುಕ್ರವಾರ(ಮೇ 31) ಬೆಳಗ್ಗೆ 9.30 ರಿಂದ ಫೋನ್​ ಇನ್​ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ, ಒಳಚರಂಡಿ, ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು&ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ದೂರವಾಣಿ ಸಂಖ್ಯೆ 080-22945119, 080-22229639 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net