

ಬೆಂಗಳೂರು: ರಾಜ್ಯ ರಾಜಧಾನಿಯನ್ನು ಅಭಿವೃದ್ಧಿಗೊಳಿಸಲು ಸರ್ಕಾರ 'ಬ್ರ್ಯಾಂಡ್ ಬೆಂಗಳೂರು' ಹೆಸರಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ. ಜತೆಗೆ ಪರಿಣಿತರಿಂದ ಅಗತ್ಯ ಸಲಹೆಗಳನ್ನೂ ಪಡೆದುಕೊಳ್ಳುತ್ತಿದೆ. ಸದ್ಯ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯನ್ನು ನೋಡಲ್ ಏಜೆನ್ಸಿಯಾಗಿ ನೇಮಕ ಮಾಡಿದೆ.
ಇದೀಗ ನಗರಕ್ಕೆ ಲಭ್ಯತೆಯಿರುವ ನೀರನ್ನು ವ್ಯವಸ್ಥಿತವಾಗಿ ಸರಬರಾಜು ಮಾಡಲು ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಲು ಜಲ ಮಂಡಳಿ ಕುಮಾರ ಸ್ವಾಮಿ ಲೇಔಟ್ನಲ್ಲಿರುವ ಡಾ. ಪ್ರೇಮ ಚಂದ್ರ ಸಾಗರ್ ಸಭಾಂಗಣದಲ್ಲಿ ಆ.10 ರಂದು ವಿಶೇಷ ಕಾರ್ಯಕ್ರಮ ಆಯೋಜಿಸಿದೆ.