ಮೇ ತಿಂಗಳ ನೀರಿನ ಸಮರ್ಪಕ ಪೂರೈಕೆಗೆ ಬೆಂಗಳೂರು ಜಲಮಂಡಳಿ ಸಜ್ಜು!

BWSSB
Published on

ಬೆಂಗಳೂರು: ಅಂತರ್ಜಲ ಕೊರತೆಯಿಂದ ಆಗಿರುವ ನೀರಿನ ಅಭಾವ ಮೇ ತಿಂಗಳಲ್ಲಿ ಹೆಚ್ಚಾದಲ್ಲಿ ಅದನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಿನಿಂದಲೇ ಸಜ್ಜಾಗುತ್ತಿದೆ ಎಂದು ಬೆಂಗಳೂರು ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ, ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಬುಧವಾರ ಮಂಡಳಿಯ ವಿವಿಧ ಕೆರೆಗಳು ಹಾಗೂ ನೀರು ಸರಬರಾಜು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಪ್ರಮುಖ ಕೆರೆಗಳಲ್ಲಿ ಒಂದಾಗಿರುವಂತಹ ಹೆಸರುಘಟ್ಟ ಕೆರೆಗೆ ಭೇಟಿ ನೀಡಿದ ಬಳಿಕ ಮಾತನಾಡುತ್ತಾ, ಪ್ರಸ್ತುತ ಕೆರೆಯಲ್ಲಿ 0.3 ಟಿಎಂಸಿಗಳಷ್ಟು ನೀರಿನ ಲಭ್ಯತೆಯಿದೆ. ಅಲ್ಲದೇ, ಈ ಪ್ರದೇಶದಲ್ಲಿರುವಂತಹ ಕೊಳವೆ ಬಾವಿಗಳಲ್ಲೂ ಉತ್ತಮ ನೀರಿದೆ. ಜಲಮಂಡಳಿಯ ಹೆಸರುಘಟ್ಟ ನೀರು ಸರಬರಾಜು ಕೇಂದ್ರದ ಮೂಲಕ ನಗರಕ್ಕೆ ಪ್ರತಿ ದಿನ 10 ಎಂ.ಎಲ್‌.ಡಿ ನೀರು ಸರಬರಾಜು ಮಾಡಬಹುದಾಗಿದೆ. ಮೇ ತಿಂಗಳಲ್ಲಿ ನೀರಿನ ಕೊರತೆ ಕಂಡು ಬಂದಲ್ಲಿ ಜಲಮಂಡಳಿಯ ನೀರು ಸರಬರಾಜು ವ್ಯವಸ್ಥೆಯ ಮೂಲಕ ಸಮರ್ಪಕವಾಗಿ ಬಳಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ತಯಾರಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಕೆರೆಯಿಂದ ಲಭ್ಯವಾಗುವಂತಹ ನೀರನ್ನ ಶುದ್ದೀಕರಿಸಲು ಹೆಸರುಘಟ್ಟ ಜಲಮಂಡಳೀ ನೀರು ಸರಬರಾಜು ಕೇಂದ್ರವನ್ನು ಸಜ್ಜುಗೊಳಿಸಬೇಕು. ಯಾವ ಪ್ರದೇಶದ ವರೆಗೆ ಈ ನೀರನ್ನು ಪೈಪ್‌ಲೈನ್‌ಗಳ ಮೂಲಕ ತಗೆದುಕೊಂಡು ಹೋಗಬಹುದೋ ಆಯಾ ಪ್ರದೇಶಗಳ ವರೆಗೆ ನೀರನ್ನು ಸರಬರಾಜು ಮಾಡಬೇಕು. ಯಾವ ಪ್ರದೇಶದಲ್ಲಿ ಪೈಪ್‌ಲೈನ್‌ ವ್ಯವಸ್ಥೆ ಇಲ್ಲವೋ ಆ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ಹೆಸರುಘಟ್ಟ ಕೆರೆ ನೀರು ಸರಬರಾಜು ಮಾಡಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವಂತಹ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net