ನೀರು ಉಳಿತಾಯಕ್ಕೆ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳಿ: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಸೂಚನೆ

BWSSB
Published on

ಬೆಂಗಳೂರು: ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ನೀರು ಉಳಿತಾಯ ಮತ್ತು ಮರುಬಳಕೆಯ ಅಭಿಯಾನದಲ್ಲಿ ಕೈ ಜೋಡಿಸಿ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ವಿ.ರಾಮ್ ಪ್ರಸಾತ್ ಮನೋಹರ್ 40 ಲಕ್ಷದಿಂದ 2 ಕೋಟಿ ಲೀ. ನೀರು ಬಳಕೆದಾರರಿಗೆ ಸೂಚನೆ ನೀಡಿದ್ದಾರೆ.

ಜಲಮಂಡಳಿ ಕೇಂದ್ರ ಕಛೇರಿಯಲ್ಲಿ ಸೋಮವಾರ 40 ಲಕ್ಷದಿಂದ 2 ಕೋಟಿ ಲೀ.ಗಳಷ್ಟು ನೀರು ಬಳಸುವ ಗ್ರಾಹಕರೊಂದಿಗೆ ಸಭೆ ನಡೆಸಿ ಗ್ರೀನ್ ಸ್ಟಾರ್ ಚಾಲೆಂಜ್​ನ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ನಗರದಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ. ಆದರೆ ಅಂತರ್ಜಲ ಕುಸಿತದಿಂದ ದಿನ ಬಳಕೆಯ ನೀರಿನ ಮೇಲೆ ಪರಿಣಾಮ ಬೀರಿದೆ. ಮುಂದಿನ ಎರಡು ತಿಂಗಳುಗಳ ಕಾಲ ನೀರಿನ ಮಿತವ್ಯಯ ಬಳಕೆಯಿಂದ ನಾವು ಈ ಪರಿಸ್ಥಿತಿಯನ್ನು ನಿಭಾಯಿಸಬಹುದಾಗಿದೆ. ಜಲಮಂಡಳಿ ಕೇವಲ ಇಂದಿನ ಪರಿಸ್ಥಿತಿಯನ್ನು ನಿಭಾಯಿಸಲು ಅಷ್ಟೇ ಅಲ್ಲದೆ, ಭವಿಷ್ಯದಲ್ಲಿ ಬೆಂಗಳೂರು ನಗರವನ್ನು ವಾಟರ್ ಸರ್​ಪ್ಲಸ್ ಮಾಡುವ ಗುರಿಯನ್ನು ಹೊಂದಿದೆ ಎಂದರು.

ಗ್ರೀನ್ ಸ್ಟಾರ್ ಚಾಲೆಂಜ್ ಸ್ವೀಕರಿಸಿ

  • ನೀರಿನ ಉಳಿತಾಯ ಮಾಡುವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು
  • ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಿಕೊಳ್ಳುವುದು
  • ಕೊಳವೆ ಬಾವಿಗಳ ಬಳಕೆಯಲ್ಲಿ ತಂತ್ರಜ್ಞಾನದ ಅಳವಡಿಕೆ
  • ಮಳೆ ನೀರು ಇಂಗು ಗುಂಡಿಗಳನ್ನು ಅಳವಡಿಸಿಕೊಳ್ಳುವುದು
  • ಈ ಎಲ್ಲಾ ಹೊಸ ಅನುಷ್ಠಾನಗಳ ಬಗ್ಗೆ ಬಳಕೆದಾರರಿಗೆ ಮಾಹಿತಿ ಕೊಡುವ ಮೂಲಕ ನೀರಿನ ಉಳಿತಾಯದ ಮಹತ್ವವನ್ನು ಸಾರುವುದುಈ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳಲು ಈಗಾಗಲೇ ಅಪಾರ್ಟ್ಮೆಂಟ್ ಹಾಗೂ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳು ಮುಂದೆ ಬಂದಿವೆ. ಈ ಚಾಲೆಂಜ್​ನ್ನು ನೀವು ಕೂಡಾ ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ವಾಟರ್ ಸರ್ ಪ್ಲಸ್ ಅಭಿಯಾನದಲ್ಲಿ ಕೈಜೋಡಿಸಿ ಎಂದು ಕರೆ ನೀಡಿದರು. ಬಲ್ಕ್ ಬಳಕೆದಾರರು ತಮ್ಮ ಸಮುದಾಯದಲ್ಲಿ ಹೆಚ್ಚು ನೀರು ಬಳಕೆ ಮಾಡುವವರಲ್ಲಿ ಜಾಗೃತಿ ಮೂಡಿಸಬೇಕು. ಅಂತರ್ಜಲ ಮಟ್ಟವನ್ನು ಕಾಯ್ದುಕೊಳ್ಳಲು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಿಕೊಳ್ಳಲು ಆದ್ಯತೆ ನೀಡುವಂತೆ ತಿಳಿಸಿದರು.

ಏಪ್ರಿಲ್ 10 ಒಳಗಾಗಿ ಈ ಕ್ರಮಗಳನ್ನು ಅಳವಡಿಸಿಕೊಳ್ಳಿ

ಏಪ್ರಿಲ್ 10ರ ಒಳಗಾಗಿ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು. ನಂತರ ಸರಬರಾಜು ಆಗುತ್ತಿರುವ ನೀರಿನಲ್ಲಿ ಶೇಕಡಾ 10 ರಷ್ಟು ಕಡಿತಗೊಳಿಸಿ ಅಗತ್ಯವಿರುವ ಕಡೆಗಳಿಗೆ ಕಾವೇರಿ ನೀರನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಜಲಮಂಡಳಿ ವತಿಯಿಂದ ಸಭೆಗೆ ಆಗಮಿಸಿದ ಪ್ರತಿನಿಧಿಗಳಿಗೆ ಸಸಿ ವಿತರಿಸಲಾಯಿತು. ಅಲ್ಲದೆ, ಹೆಚ್ಚು ಸಸಿಗಳನ್ನು ನೆಡುವ ಮೂಲಕ ಬ್ರ್ಯಾಂಡ್ ಬೆಂಗಳೂರು ಮೌಲ್ಯವನ್ನು ಉಳಿಸೋಣ ಎಂದು ಕರೆನೀಡಿದರು. ಈಗಾಗಲೇ 133 ಬಿಲ್ಡರ್​ಗಳೊಂದಿಗೆ ಸಭೆ ನಡೆಸಲಾಗಿದೆ. ಅವರಿಗೆ ಸಂಸ್ಕರಿಸಿದ ನೀರು ಬಳಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಮಿತವಾಗಿ ನೀರು ಬಳಿಸುವ ಮೂಲಕ ನೀರು ಉಳಿಸಬೇಕು. ಮನೆಯಲ್ಲಿ ಹೆಚ್ಚು ನೀರು ಬಳಸುವ ಜಾಗದಲ್ಲಿ ಏರಿಯೆಟರ್ ಅಳವಡಿಸಬೇಕು. ವಾಷಿಂಗ್‌ಮಿಷನ್ ಒಳಗೆ ಬರುವ ನೀರನ್ನು ಮರುಬಳಿಸಿ, ಒಂದು ಫ್ಲಷ್‌ಗೆ 20 ಲೀಟರ್ ಹೊರಹೋಗುತ್ತಿದ್ದು, ಇದನ್ನು ತಡೆಗಟ್ಟಲು ಫ್ಲಷ್‌ ಬ್ಯಾಗ್ ಆಳವಡಿಸಬೇಕು. ಸಂಸ್ಕರಿಸಿದ ನೀರು ಬಳಕೆ ಮಾಡುವಂತೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net