

ಅಳವಂಡಿ: ಸರ್ಕಾರ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಜಾರಿಗೊಳಿಸಿದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷ ಯಮನೂರಪ್ಪ ಚಿಕ್ಕಣ್ಣವರ ಹೇಳಿದರು.
ಸಮೀಪದ ಹಟ್ಟಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಿಂದ ಬುಧವಾರ ಹಮ್ಮಿಕೊಂಡಿದ್ದ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತವಾಗಬಾರದು. ಶಾಲೆ ಬಿಟ್ಟ ಮಕ್ಕಳ ಮನೆಗೆ ಶಿಕ್ಷಕರ ಹಾಗೂ ಎಸ್ಡಿಎಂಸಿ ಸದಸ್ಯರ ತಂಡ ಭೇಟಿ ನೀಡಿ ಪಾಲಕರ ಮನವೊಲಿಸಿ ಮರಳಿ ಶಾಲೆಗೆ ಕರೆ ತರಲಾಗುತ್ತಿದೆ. ಶಿಕ್ಷಣದಿಂದ ಮಾತ್ರ ಉನ್ನತ ಹುದ್ದೆ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ವೀರಣ್ಣ ಮಟ್ಟಿ, ಶಿಕ್ಷಣಪ್ರೇಮಿ ಡಾ.ಕುಂಬಾರ, ಶಿಕ್ಷಕರಾದ ಪ್ರಶಾಂತ ಹಿರೇಮಠ, ರವಿಕುಮಾರ, ಹಂಪವ್ವ ಪೂಜಾರ ಇದ್ದರು.