ಉಪಚುನಾವಣೆ, 33 ನಾಮಪತ್ರ ಸಲ್ಲಿಕೆ

election
Published on

ಬೆಳಗಾವಿ: ಲೋಕಸಭಾ ಕ್ಷೇತ್ರಕ್ಕೆ ಜರುಗುತ್ತಿರುವ ಉಪ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಸೇರಿ 23 ಅಭ್ಯರ್ಥಿಗಳು ಒಟ್ಟು 33 ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಮಂಗಲ ಅಂಗಡಿ, ಕಾಂಗ್ರೆಸ್‌ನಿಂದ ಸತೀಶ ಜಾರಕಿಹೊಳಿ ಅವರು ತಲಾ 4 ಪ್ರತಿ ನಾಮಪತ್ರ, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ತಲಾ 2 ಪ್ರತಿ ನಾಮಪತ್ರ ಸಲ್ಲಿಸಿದ್ದಾರೆ.

ಶಿವಸೇನೆಯಿಂದ ಕೃಷ್ಣಾ ಪಾಟೀಲ, ಎಂಇಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶುಭಂ ಶೇಳಕೆ ಸೇರಿ ಒಟ್ಟು 19 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಇಲ್ಲಿಯವರೆಗೆ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net