ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

election-1
Published on

ಧಾರವಾಡ: ವಿವಿಧ ಕಾರಣಗಳಿಂದ ತೆರವಾದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಕಲಘಟಗಿ ತಾಲೂಕಿನ ಪಟ್ಟಣ ಪಂಚಾಯಿತಿ 1ನೇ ವಾರ್ಡ್‌ಗೆ ಅನೂಸೂಚಿತ ಪಂಗಡದ 1 ಸ್ಥಾನ ಹಾಗೂ ನವಲಗುಂದ ತಾಲೂಕಿನ ಪುರಸಭೆಯ 23ನೇ ವಾರ್ಡ್‌ಗೆ ಸಾಮಾನ್ಯ ಮಹಿಳೆ 1 ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಡಿ. 8ರಂದು ಅಧಿಸೂಚನೆ ಹೊರಡಿಸಲಾಗಿದೆ. 15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. 16ರಂದು ಪರಿಶೀನೆ, 18ರಂದು ಉಮೇದುವಾರಿ ಹಿಂತೆಗೆದುಕೊಳ್ಳಲು ಕೊನೆಯ ದಿನ. 27ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ಹಾಗೂ 30ರಂದು ಬೆಳಗ್ಗೆ 8ರಿಂದ ಮತಗಳ ಎಣಿಕೆಯನ್ನು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net