

ಶಿವಮೊಗ್ಗ: ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವು ಸರ್ಕಾರಕ್ಕೆ ಶಕ್ತಿ ಹೆಚ್ಚಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ರಾಜ್ಯದ ಜನ ಕಾಂಗ್ರೆಸ್ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮತ ಹಾಕಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಮೂರು ಕ್ಷೇತ್ರದಲ್ಲಿ ಮನೆ ಮನೆಗೆ ಹೋಗಿ ಮತ ಕೇಳಿದ್ದಾರೆ. ಅದರ ಪರಿಣಾಮ ಗೆಲುವು ಸಿಕ್ಕಿದೆ. ಮತದಾರರು ಪ್ರತಿಪಕ್ಷಗಳ ಸ್ಥಾನ ತೋರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿದ್ದ ಪ್ರತಿಪಕ್ಷಗಳಿಗೆ ಮತದಾರರು ತಕ್ಕ ಪಾಠ ತೋರಿಸಿದ್ದು ನಮ್ಮ ಜವಾಬ್ದಾರಿಯನ್ನು ಹೆಚ್ಚುವಂತೆ ಮಾಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಿಂದುಳಿದ ವರ್ಗಗಳ ರಾಜ್ಯದ ಅಧ್ಯಕ್ಷರಾಗಿ ನನಗೆ ಸವಣೂರಿನ ಉಸ್ತುವಾರಿ ನೀಡಲಾಗಿತ್ತು. ತಿಳುವಳ್ಳಿ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆಗೂ ಮುನ್ನ ಹೋಗಿದ್ದೆ. ಶಿಗ್ಗಾವಿಯಲ್ಲಿ ಉತ್ತಮ ಕೆಲಸ ಮಾಡಿದ್ದೇವು. ಸರ್ಕಾರದಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇವೆ ಎಂದರು.