

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿ ತಾಲೂಕಿನ ಹಳ್ಯಾಳ, ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ, ಶಿವಳ್ಳಿ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ, ಸೂರಶೆಟ್ಟಿಕೊಪ್ಪ, ನವಲಗುಂದ ತಾಲೂಕಿನ ಶಿರಕೋಳ, ಯಮನೂರ ಹಾಗೂ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ದೆಶಿಸಿದೆ.
ಮೇ 14 ನಾಮಪತ್ರ ಸಲ್ಲಿಸಲು ಕೊನೆಯ ದಿನ. 15ರಂದು ನಾಮಪತ್ರಗಳ ಪರಿಶೀಲನೆ, ಮೇ 17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 25ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಮೇ 28ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.