ಗ್ಯಾರಂಟಿ ಯೋಜನೆಯಿಂದ ಜನರಿಗೆ ಅನುಕೂಲ

Gruha-Lakshmi-2
Published on

ಮಾಂಜರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳಿಂದ ಮಧ್ಯಮ ಹಾಗೂ ಬಡ ಜನರಿಗೆ ಅನುಕೂಲವಾಗಿದೆ ಎಂದು ಮುಖಂಡ ಸಿದ್ದಾರ್ಥ ಗಾಯಾಗೋಳ ಹೇಳಿದರು.

ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಧುಳಗನವಾಡಿಯ ರಂಗ ದರ್ಶನ ಗ್ರಾಮೀಣ ವಿಕಾಸ ಸಂಘದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಕುರಿತಾದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಲಕ್ಷ್ಮಣ ಮಾಯನ್ನವರ, ರವೀಂದ್ರ ವಡವಡೆ, ಕುಮಾರ ಮಾಯನ್ನವರ, ರಾಘವೇಂದ್ರ ಲಂಬುಗೋಳ, ಜಾವೀದ್ ಮಕಾನದಾರ, ಕಲಾವಿದರಾದ ಭರತ ಕಲಾಚಂದ್ರ, ಮಾರುತಿ ಕಾಮಗೌಡ, ಸುಜಾತಾ ಮಗದುಮ್, ಸಾವಿತ್ರಿ ಹಳಕಲ, ಸಂತ್ರಾಮ ಮಯೂರ, ಮಾರುತಿ ಕಮತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net