ದೀಪ ಬೆಳಗುವುದರಿಂದ ಸಕಲ ಸಂಕಲ್ಪ ಸಿದ್ಧಿ

04-12-Shiva-2
ರಾಯಚೂರಿನ ಸೋಮವಾರಪೇಟೆ ಹಿರೇಮಠದಲ್ಲಿ ಕಾರ್ತಿಕ ಮಾಸದ ನಿಮಿತ್ತ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ದೀಪೋತ್ಸವ ಕಾರ್ಯಕ್ರಮಕ್ಕೆ ಶ್ರೀಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
Published on

ರಾಯಚೂರು: ಕಾರ್ತಿಕ ಮಾಸದಲ್ಲಿ ಗುರುಮನೆ, ಮಠ ಮಂದಿರಗಳಲ್ಲಿ ದೀಪ ಬೆಳೆಗಿಸಿದರೆ ಸಕಲ ಸಂಕಲ್ಪಗಳು ಈಡೇರಲಿವೆ ಎಂದು ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದ ಸೋಮವಾರಪೇಟೆ ಹಿರೇಮಠದಲ್ಲಿ ಕಾರ್ತಿಕ ಮಾಸದ ನಿಮಿತ್ತ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ದೀಪ ಬೆಳಗುವುದರಿಂದ ಮನೆಯಲ್ಲಿ ಅನ್ನ ಮತ್ತು ಲಕ್ಷ್ಮಿ ಸ್ಥಿರವಾಗಿ ನಿಲ್ಲುತ್ತಾಳೆ ಎಂದರು.
ಶ್ರೀಮಠದ ಪೂರ್ವ ಪೀಠಾಧ್ಯಕ್ಷರಾದ ರಾಚೋಟಿ ಶಿವಾಚಾರ್ಯರ ಸಂಕಲ್ಪದಂತೆ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತರ ಸಹಕಾರದೊಂದಿಗೆ ಬೃಹತ್ ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡಲಾಗಿದೆ. ಜ.21ರಂದು ರಂಭಾಪುರಿ ಶ್ರೀಗಳು ಕಲ್ಯಾಣ ಮಂಟಪವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ 1008 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಕಲ್ಪ ಹೊಂದಲಾಗಿದೆ ಎಂದು ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೀರಭದ್ರಪ್ಪ ಗದ್ವಾಲ್, ಎನ್.ಗಿರಿಜಾಶಂಖರ, ಮಲ್ಲಿಕಾರ್ಜುನ ದೋತರಬಂಡಿ, ಷಣ್ಮುಖಪ್ಪ ವೆಂಕಟಾಪುರ, ವೀರಭದ್ರಪ್ಪ ಅಂತರಗಂಗಿ, ಮಹಾಂತೇಶ ಪಾಟೀಲ್ ಅತ್ತನೂರು, ಚನ್ನಬಸವ ಹಾಗೂ ಬಡಾವಣೆ ಮಹಿಳೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net