ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆ

kkkkkkkkk
Published on



ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು(ಬ್ಯಾರಿ ಭಾಷೆ ಮತ್ತು ಸಂಘಟನೆ),ಮರಿಯಮ್ ಇಸ್ಮಾಯಿಲ್ ಉಳ್ಳಾಲ(ಬ್ಯಾರಿ ಸಾಹಿತ್ಯ)ಮತ್ತು ಎಂ.ಜಿ.ಶಾಹುಲ್ ಹಮೀದ್ ಗುರುಪುರ(ಬ್ಯಾರಿ ಸಂಸ್ಕೃತಿ ಮತ್ತು ಕಲೆ)ಹಾಗೂ 2023ನೇ ಸಾಲಿನಲ್ಲಿ ಟಿ.ಎ.ಆಲಿಯಬ್ಬ
ಜೋಕಟ್ಟೆ(ಬ್ಯಾರಿ ಭಾಷೆ ಮತ್ತು ಸಂಘಟನೆ),ಅಶ್ರಫ್ ಅಪೋಲೊ ಕಲ್ಲಡ್ಕ(ಬ್ಯಾರಿ ಸಂಸ್ಕೃತಿ ಮತ್ತು ಕಲೆ)ಮತ್ತು ಮಹಮ್ಮದ್
ಶರೀಫ್ ನಿರ್ಮುಂಜೆ(ಬ್ಯಾರಿ ಸಾಹಿತ್ಯ) ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಮ್ಮದ್ ಕರಂಬಾರು,ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ,ಆಯಿಶಾ ಯು.ಕೆ.ಮತ್ತು ಹುಸೈನ್ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಪ್ರಶಸ್ತಿಯು 50 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ ಪ್ರಶಸ್ತಿ ಪ್ರದಾನ ಸಮಾರಂಭ ಸೆ. 6ರಂದು ಸಾಯಂಕಾಲ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ
ಉಮರ್ ಯು. ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net