

ಹಾವೇರಿ: ಬ್ಯಾಡಗಿ ತಾಲೂಕು ಮೋಟೆಬೆನ್ನೂರಿನ ಬಳ್ಳಾರಿ ರುದ್ರಪ್ಪ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜೂ. 24ರಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ವತಿಯಿಂದ ಜಿಲ್ಲಾಮಟ್ಟದ ಕಾರ್ಯಕರ್ತರ ಸಮಾವೇಶ (ಜನಸಭಾ ಕಾರ್ಯಕ್ರಮ) ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ತಿಳಿಸಿದ್ದಾರೆ.