

ಬ್ಯಾಡಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾವೇರಿ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಸೆ. 15 ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಎಸ್‌ಜೆಜೆಎಂ ತಾಲೂಕು ಕ್ರೀಡಾಂಗಣದಲ್ಲಿ 2023-24ನೇ ಸಾಲಿನ ದಸರಾ ಕ್ರೀಡಾಕೂಟ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯ ಸಚೇತಕ ಸಲೀಂ ಅಹ್ಮದ್ ಉಪಸ್ಥಿತರಿರುವರು. ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸುವರು. ಅತಿಥಿಗಳಾಗಿ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ನೆಹರು ಓಲೇಕಾರ, ಎಸ್.ಆರ್. ಪಾಟೀಲ, ಕ್ರೀಡಾಧಿಕಾರಿ ಲತಾ ಬಿ.ಎಚ್., ತಹಸೀಲ್ದಾರ್ ಎಸ್.ವಿ. ಪ್ರಸಾದ್, ತಾಪಂ ಇಒ ಮಲ್ಲಿಕಾರ್ಜುನ ಕೆ.ಎಂ., ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟೆ, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಾಲೂಕು ಸಹಾಯಕ ಕ್ರೀಡಾಧಿಕಾರಿ ಎಚ್.ಬಿ. ದಾಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.