ಬ್ಯಾಡಗಿ ಗಲಾಟೆ, ಬಂಧನಕ್ಕೆ ಕ್ರಮ; ಡಾ.ಪರಮೇಶ್ವರ

Byadagi
Published on

ಬೆಂಗಳೂರು: ಬ್ಯಾಡಗಿಯಲ್ಲಿ ಮೆಣಸಿನ ದರ ದಿಢೀರ್ ಕುಸಿತದ ವಿರುದ್ಧ ರೈತರ ಪ್ರತಿಭಟನೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ 42 ಜನರನ್ನು ಬಂಧಿಸಿ ಅವರ ಹೇಳಿಕೆಗಳನ್ನು ಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು.

ಘಟನೆ ವೇಳೆ ಹೊರಗಿನಿಂದ ಬಂದವರೂ ಇದ್ದರು. ಅವರೆಲ್ಲ ಓಡಿಹೋದ್ದಾರೆ. ಸಿಸಿಟಿವಿ ಪರಿಶೀಲನೆ ಮಾಡಿ, ಒಂದು ತಂಡವನ್ನು ಆಂಧ್ರ ಪ್ರದೇಶದ ನೆಲ್ಲೂರು ಕಡೆ ಕಳುಹಿಸಲಾಗಿದೆ.

ತಪ್ಪಿಸಿಕೊಂಡವರನ್ನು ಹುಡುಕಿ ಕರೆ ತರಲು ತಂಡ ಕಳುಹಿಸಲಾಗಿದೆ ಎಂದು ಹೇಳಿದರು. ಯಾವ ಕಾರಣಕ್ಕೆ ಗಲಾಟೆ ಸಂಭವಿಸಿತು ಎಂಬ ಕುರಿತು ತನಿಖೆ ನಡೆಯುತ್ತಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಬೆಲೆ ಕಡಿಮೆ ಆಗಿದ್ದಕ್ಕೆ ಪ್ರತಿಭಟನೆ ಮಾಡಿದ್ದಾರೆ. ಬೆಲೆ ಕಡಿಮೆ ಮಾಡಿಸಿ ಗಲಾಟೆ ಮಾಡಿಸಿದ್ದರೇ ಎಂಬುದು ಗೊತ್ತಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಡಾ.ಪರಮೇಶ್ವರ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net