

ಕಾರವಾರ: ಕರ್ನಾಟಕ ಉಪ ಚುನಾವಣೆಯ Bye Election ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿಗೆ ಮರಳುವ ಮುನ್ನ ಮುರ್ಡೇಶ್ವರ ಗಾಲ ಕ್ಲಬ್ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ನಾವು ನಮ್ಮ ಪ್ರಯತ್ನ ಮಾಡಿದ್ದೇವೆ. ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ. ನನಗೆ ಆ ರಾಜ್ಯದ ಬಗ್ಗೆ ಹೆಚ್ಚು ಚಿತ್ರಣವಿಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ, ಆಗ ಕಾಂಗ್ರೆಸ್ ಪರ ಅಲೆ ಕಂಡಿತು. ಆದರೆ ಮತ ಪೆಟ್ಟಿಗೆಯಲ್ಲಿ ಏನಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಜಾರ್ಖಂಡ್ ಬಗ್ಗೆ ಗೊತ್ತಿಲ್ಲ" ಎಂದು ಹೇಳಿದರು. ಚನ್ನಪಟ್ಟಣದಲ್ಲಿ ಗೆಲುವು ಖಂಡಿತ ಎಲ್ಲಾ ಎಕ್ಸಿಟ್ ಪೋಲ್ ಗಳು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಸೋಲು ಹಾಗೂ ಜಮೀರ್ ಅವರ ಮೈ ಬಣ್ಣ ಹೇಳಿಕೆ ಪರಿಣಾಮ ಬೀರಿದೆ ಎನ್ನುವ ಬಗ್ಗೆ ಕೇಳಿದಾಗ, `ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ 16 ಸಾವಿರ ಮತಗಳು ಮಾತ್ರ ದೊರೆತಿದ್ದವು. ಆದರೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸ ನನಗಿದೆ. ರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ" ಎಂದರು.
ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಮೈ ಬಣ್ಣದ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ, ಅವರ ಹೇಳಿಕೆ ಕುರಿತು ಪಕ್ಷದೊಳಗೆ ಅಸಮಾಧಾನ ಇರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಜಮೀರ್ ಅವರು ಉತ್ತಮ ಕೆಲಸಗಾರ. ಇದು ಪಕ್ಷದ ಆಂತರಿಕ ವಿಚಾರ. ಅವರಿಗೆ ಈ ಬಗ್ಗೆ ಬುದ್ದಿ ಹೇಳಲಾಗಿದೆ. ಅವರು ಆತುರವಾಗಿ ಒಂದಷ್ಟು ಹೇಳಿಕೆ ಕೊಟ್ಟಿದ್ದಾರೆ. ಇದು ತಪ್ಪು ಎಂದು ನಾವು ಹೇಳಿದ್ದೇವೆ. ಪಕ್ಷದ ಅಧ್ಯಕ್ಷನಾಗಿ ನಾನೇ ಅವರಿಗೆ ಬುದ್ಧಿ ಹೇಳಿದ್ದೇನೆ. ನನ್ನ ಹೊರತಾಗಿ ಮತ್ತಿನ್ಯಾರು ಅವರಿಗೆ ಬುದ್ಧಿವಾದ ಹೇಳಬೇಕು? ಜಮೀರ್ ಅವರು ಈಗಾಗಲೇ ಅವರ ಹೇಳಿಕೆಯ ಬಗ್ಗೆ ಕ್ಷಮೆ ಕೇಳಿದ್ದಾರೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ" ಎಂದರು.
ಸAಪುಟ ವಿಸ್ತರಣೆಯ ಬಗ್ಗೆ ಊಹಾಪೋಹಗಳು ಹರಡಿರುವ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ನಾನು ಮುಖ್ಯಮಂತ್ರಿ ಅಲ್ಲ, ಸಿದ್ದರಾಮಯ್ಯನವರು ನಮ್ಮ ಮುಖ್ಯಮಂತ್ರಿ. ಅವರು ಇದರ ಬಗ್ಗೆ ಉತ್ತರ ಹೇಳುತ್ತಾರೆ" ಎಂದರು.