ಹೊಳೆನರಸೀಪುರ: ಪಟ್ಟಣದ ಪುರಸಭೆ ವಾರ್ಡ್ 11ರ ಸದಸ್ಯರಾಗಿದ್ದ ಕೆ.ಆರ್.ಸುಬ್ರಮಣ್ಯ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.27ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.
ಡಿ.8ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಗುರುವಾರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಚ್.ಎನ್.ಬೈರಶೆಟ್ಟಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಎ.ಆರ್.ರವಿಕುಮಾರ್, ವಿ.ಎ.ಕೃಷ್ಣ ಹಾಗೂ ಎಚ್.ವಿ.ಭಗವಾನ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ವಿ.ಸುರೇಶ್ ಕುಮಾರ್ ಉಮೇದುವಾರಿಕೆ ಸಲ್ಲಿಸಿದ್ದಾರೆ. ಡಿ.15ರಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯಗೊಳ್ಳಲಿದೆ.
ಡಿ.16ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಡಿ.18ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.27ರಂದು ಮತದಾನ ನಡೆಯಲಿದ್ದು, ಡಿ.30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.