ಸಂವಿಧಾನ ಜಾಗೃತಿ ಬೈಕ್ ರ‌್ಯಾಲಿ

6-KGLPHOTO-6,,
Published on

ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಸಂವಿಧಾನ ಜಾಗೃತಿ ಬೈಕ್ ರ‌್ಯಾಲಿಗೆ ಉಪವಿಭಾಗಧಿಕಾರಿ ಬಿ.ಆರ್.ಮಹೇಶ್ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕೈಗೊಂಡಿದೆ. ಅದರ ಭಾಗವಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಪಟ್ಟಣ ವಿವಿಧ ಇಲಾಖೆ ಅಧಿಕಾರಿಗಳು ಸಂವಿಧಾನ ಜಾಗೃತಿ ಬೈಕ್ ರ‌್ಯಾಲಿಯನ್ನು ಹಮ್ಮಿಕೊಂಡಿದ್ದೇವೆ. ಇದರಿಂದ ಸಂವಿಧಾನದ ಹಕ್ಕು, ಕರ್ತವ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿಯಲಿದೆ ಎಂದರು.
ಈ ವೇಳೆ ರ‌್ಯಾಲಿ ಅಂಬೇಡ್ಕರ್ ಪ್ರತಿಮೆ ವೃತ್ತದಿಂದ ಪ್ರಾರಂಭಿಸಿ ಪ್ರವಾಸಿ ಮಂದಿರದ ವೃತ್ತದ ಮುಖೇನ ಪ್ರಮುಖ ರಸ್ತೆಗಳಲ್ಲಿ ಸಾಗಿತು. ತಹಸೀಲ್ದಾರ್ ಮಂಜುಳಾ, ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಕೇಶವಮೂರ್ತಿ, ನಗರಸಭೆ ಪೌರಾಯುಕ್ತ ರಮೇಶ್, ಪಿಎಸ್‌ಐ ಮಹೇಶ್‌ಕುಮಾರ್, ಸಮುದಾಯ ಸಂಘಟನಾ ಅಧಿಕಾರಿ ಪರಶಿವ, ನಗರಸಭಾ ಸದಸ್ಯರಾದ ಶಾಂತರಾಜು ಬಸ್ತೀಪುರ, ಮಂಜುನಾಥ್, ಜಿ.ಪಿ ಶಿವಕುಮಾರ್, ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವಿ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net