

ಕಲಬುರಗಿ: ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಜನಪರ, ಅಭಿವೃದ್ಧಿ ಯೋಜನೆಗಳು ಕಾರಣ ಎಂದು ಕಾಂಗ್ರೆಸ್ ಮುಖಂಡ ಡಾ.ಶರಣಬಸಪ್ಪ ಕಾಮರೆಡ್ಡಿ ತಿಳಿಸಿz್ದÁರೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ಕಾರ್ಮಿಕರು ಬಡವರಿಗಾಗಿ ತಂದ ಯೋಜನೆಗಳು ಕಾಂಗ್ರೆಸ್‌ಗೆ ಕೈ ಹಿಡಿದಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ, ಡಿ.ಕೆ.ಶಿವಕುಮಾರಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನವರು ಸುಳ್ಳು ಹೇಳಿದ್ದರೂ ಜನ ಕಿವಿಕೊಟ್ಟಿಲ್ಲ. ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಸಂಘಟನಾ ಮಾರ್ಗದರ್ಶನ ಗೆಲುವಿಗೆ ಸಾಥ್ ನೀಡಿದ್ದು, ಅವರಿಗೆ ಇನ್ನಷ್ಟು ಶಕ್ತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.