ಬಿವೈಆರ್ ಹೊಗಳಿಕೆ ಕಾಂಗ್ರೆಸ್‌ಗೆ ಲಾಭ

kpcc spokeperson ayanur manjunath
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್
Published on

ಶಿವಮೊಗ್ಗ: ಶಾಸಕ ಶಾಮನೂರು ಶಿವಶಂಕರಪ್ಪ ಅವರು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎನ್ನುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ವೇದಿಕೆಯ ಸೌಜನ್ಯಕ್ಕಾಗಿ ಆ ರೀತಿ ಹೇಳಿದ್ದಾರೆ. ಇದರಿಂದ ಬಿಜೆಪಿಗೇ ಒಳಹೊಡೆತ ಆಗಲಿದ್ದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಲಾಭ ಆಗಲಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.

ಶಾಮನೂರು ಶಿವಶಂಕರಪ್ಪ ಅವರು ತುಂಬ ಚಾಣಾಕ್ಷ ರಾಜಕಾರಣಿ. ಹಿರಿಯರು ಆಗಿದ್ದು ಅವರ ಬಗ್ಗೆ ಅಪಾರ ಗೌರವವಿದೆ. ಸಂದರ್ಭವನ್ನು ನೋಡಿಕೊಂಡು ಆ ರೀತಿ ಮಾತನಾಡಿದ್ದಾರೆ. ಅವರಿಂದ ಅಚಾತುರ್ಯವಾಗಿರುವುದು ನಿಜ. ಆದರೆ ಮತ್ತೊಂದು ರೀತಿಯಲ್ಲಿ ಅದರಿಂದ ಕಾಂಗ್ರೆಸ್‌ಗೆ ಲಾಭವು ಆಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವೀರಶೈವರಲ್ಲದ ಹಿಂದುಳಿದ ವರ್ಗಗಳು ಜಾಗೃತಗೊಂಡಿವೆ. ಬಹುಶಃ ಇದನ್ನು ಗಮನದಲ್ಲಿಟ್ಟುಕೊಂಡು ಅವರು ಬಿಜೆಪಿಗೆ ಒಳಹೊಡೆತ ಕೊಟ್ಟಿದ್ದಾರೆ ಎಂದರು. ಶಾಮನೂರು ಅವರಿಗೆ ರಾಘವೇಂದ್ರ ಅವರ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ಇದ್ದರೆ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಅವರನ್ನೇ ನಿಲ್ಲಿಸಿ ಗೆಲ್ಲಿಸಿ ತಮ್ಮ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡಿಸಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net