ಚಿನಕುರಳಿ ಸಹಕಾರ ಸಂಘಕ್ಕೆ ಸಿ.ಎಸ್.ಗೋಪಾಲಗೌಡ ಅಧ್ಯಕ್ಷ

6-pnp 2
ಪಾಂಡವಪುರ ತಾಲೂಕಿನ ಚಿನಕುರಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಸಿ.ಎಸ್.ಗೋಪಾಲಗೌಡ ಹಾಗೂ ಸಿ.ಸುರೇಂದ್ರ ಅವರನ್ನು ಸಹ ನಿರ್ದೇಶಕರು ಮತ್ತು ಜೆಡಿಎಸ್ ಮುಖಂಡರು ಅಭಿನಂದಿಸಿದರು. ಸಿ.ಶಿವಕುಮಾರ್, ಸಿ.ಅಶೋಕ್ ಇತರರು ಇದ್ದರು.
Published on

ಪಾಂಡವಪುರ: ತಾಲೂಕಿನ ಚಿನಕುರಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಸಿ.ಎಸ್.ಗೋಪಾಲಗೌಡ, ಸಿ.ಸುರೇಂದ್ರ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಆಡಳಿತ ಮಂಡಳಿ ಅವಧಿ ಮುಗಿದ ಬಳಿಕ ಇತ್ತೀಚೆಗೆ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಸಂಘದ ಎಲ್ಲ 11 ಸ್ಥಾನಗಳು ಜೆಡಿಎಸ್ ಬೆಂಬಲಿತರ ಪಾಲಾಗಿತ್ತು. ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಅದರಂತೆ ಚುನಾವಣೆ ಪ್ರಕ್ರಿಯೆಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಿ.ಎಸ್.ಗೋಪಾಲಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಸಿ.ಸುರೇಂದ್ರ ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಸಂಘಗಳ ನಿಬಂಧಕರ ಕಚೇರಿಯ ಆನಂದ ನಾಯಕ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ ಮಾತನಾಡಿ, ಚಿನಕುರಳಿ ಸೊಸೈಟಿ ಜಿಲ್ಲೆಯ ಮಾದರಿ ಸಂಘವಾಗಿ ಕೆಲಸ ಮಾಡುತ್ತಿದೆ. ಸೊಸೈಟಿ ವತಿಯಿಂದ ನಡೆಯುತ್ತಿರುವ ಸೂಪರ್ ಮಾರುಕಟ್ಟೆ, ಆಹಾರ, ಗೊಬ್ಬರ ಶಾಖೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತೇನೆ. ಜತೆಗೆ ರೈತರಿಗೆ ಸಾಲ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಿಕೊಡುವ ಮೂಲಕ ಎಲ್ಲ ನಿರ್ದೇಶಕರ ಜತೆಗೂಡಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಸಂಘದ ನಿರ್ದೇಶಕರಾದ ಸಿ.ಎಂ.ಕಾಳೇಗೌಡ, ಕೆ.ಎ.ಸ್ವಾಮಿಗೌಡ, ಜಿ.ಕೆ.ಕುಮಾರ, ಕೆ.ವೈ.ಭವ್ಯಾ, ತಾಯಮ್ಮ, ರಾಮಕೃಷ್ಣೇಗೌಡ, ಕೆ.ಎಸ್.ಚಂದ್ರು, ಸಿಂಗ್ರಯ್ಯ, ಕಾರ್ಯದರ್ಶಿ ಕಾಂತರಾಜು, ಮುಖಂಡರಾದ ಸಿ.ಎಸ್.ಗಂಗಾಧರ್, ಸಿ.ಕೆ.ಅಂಕೇಗೌಡ, ಸಿ.ಪ್ರಕಾಶ್, ವಿಎಸ್‌ಎಸ್‌ಎನ್‌ಬಿ ಮಾಜಿ ಅಧ್ಯಕ್ಷರಾದ ಮಂಜುನಾಥ್, ಮೊಗ್ಗಣ್ಣೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net